ಮಾ. 17 ರಂದು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕರಾವಳಿ ಧ್ವನಿ ಯಾತ್ರೆ

ಕಾರ್ಕಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಜಾಧ್ವನಿ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮಾ. 17 ರಂದು ಕರವಾಳಿ ಧ್ವನಿಯಾತ್ರೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ಕೆದಿಂಜೆ ಪೇಟೆಯಲ್ಲಿ, 12ಗಂಟೆಗೆ ಬಜಗೋಳಿಯ ಚಿರಾಗ್‌ ಹೊಟೇಲ್‌, ಮಧ್ಯಾಹ್ನ 3 ಗಂಟೆಗೆ ಕಾರ್ಕಳ ಬಂಡಿಮಠ ಬಸ್‌ನಿಲ್ದಾಣದಲ್ಲಿ ಹಾಗೂ ಸಂಜೆ 5ಗಂಟೆಗೆ ಹೆಬ್ರಿ ಬಸ್‌ ನಿಲ್ದಾಣದಲ್ಲಿ ಸಮಾರಂಭ ಜರುಗಲಿದೆ.

ಈ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ. ಎಮ್. ವೀರಪ್ಪ ಮೊಯ್ಲಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವ ಆರ್. ಬಿ. ದೇಶ್ ಪಾಂಡೆ, ರಾಜ್ಯ ಹಿಂದುಳಿದ ವರ್ಗದ ಅದ್ಯಕ್ಷ ಮಧುಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹಾಗೂ ಪಕ್ಷದ ಇತರ ನಾಯಕರುಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಬೇಕೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











































error: Content is protected !!
Scroll to Top