ಮಾ.20ರಂದು ಬೆಳಗಾವಿಯಲ್ಲಿ ರಾಹುಲ್‌ ಗಾಂಧಿ ರ್ಯಾಲಿ

ಮೋದಿ ರ್ಯಾಲಿಯನ್ನು ಮೀರಿಸಲು ಕಾಂಗ್ರೆಸ್‌ ನಾಯಕರ ಸಿದ್ಧತೆ

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾ.20ರಂದು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾ.16ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.
ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾರ್ಚ್‌ 18, 19ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆಯಬೇಕಿದ್ದ ‘ಪ್ರಜಾಧ್ವನಿ’ ಯಾತ್ರೆಯನ್ನು ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.































error: Content is protected !!
Scroll to Top