ಕಾರ್ಕಳ : ಲೈನ್ ಶಿಪ್ಟಿಂಗ್ ಕಾಮಗಾರಿ ಇರುವುದರಿಂದ ಮಾ. 24 ರಂದು ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬೈಲೂರು ಎಕ್ಸ್‌ಪ್ರೆಸ್, ಕೆ. ಹೆಚ್.ಬಿ, ಪದವು ಮತ್ತು ನಕ್ರೆ ಫೀಡರ್‌ನಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ. ಬೈಲೂರು, ನೀರೆ, ಎರ್ಲಪಾಡಿ, ಕೌಡೂರು, ಪರಪ್ಪು, ಗುಂಡ್ಯಡ್ಕ, ಬೋರ್ಗಲ್ ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಜಾರ್ಕಳ, ಕೆ.ಹೆಚ್.ಬಿ, ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಕಾರ್ಕಳ ಮೆಸ್ಕಾಂ ಇಲಾಖೇ ಪ್ರಕಟನೆಯಲ್ಲಿ ತಿಳಿಸಿದೆ.
ಮಾ. 24 ರಂದು ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯ



















