ಅಬಕಾರಿ ನೀತಿ ಹಗರಣ : ಮನೀಶ್ ಸಿಸೋಡಿಯಾಗೆ ಮತ್ತೆ ಐದು ದಿನ ಇಡಿ ಕಸ್ಟಡಿ

ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಕೋರ್ಟ್ ಮತ್ತೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಎರಡು ದಿನಗಳ ವಿಚಾರಣೆಯ ನಂತರ ದೆಹಲಿಯ ಮದ್ಯ ನೀತಿ ವಿಷಯಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾ. 9 ರಂದು ಹಣಕಾಸು ತನಿಖಾ ಸಂಸ್ಥೆ ಬಂಧಿಸಿತ್ತು. ಅವರ ಕಸ್ಟಡಿಯು ಇವತ್ತು ಅಂತಿಮವಾದ ಹಿನ್ನಲೆಯಲ್ಲಿ ದೆಹಲಿ ಮದ್ಯ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಇಡಿ ಬೇಡಿಕೆಯ ಮೇರೆಗೆ ನ್ಯಾಯಾಲಯ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಇನ್ನೂ 5 ದಿನಗಳವರೆಗೆ ವಿಸ್ತರಿಸಿದೆ. ಅಂತೆಯೇ ಪ್ರಕರಣದ ಮುಂದಿನ ವಿಚಾರಣೆ ಮಾ. 22 ರಂದು ನಡೆಯಲಿದೆ.









































error: Content is protected !!
Scroll to Top