ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿ ಸಿ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಮಾ.21 ರಂದು ಮಧ್ಯಾಹ್ನ 2:30ಕ್ಕೆ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಲಿದೆ. ಡೀಮ್ಡ್ ಫಾರೆಸ್ಟ್ ಕುರಿತಾದ ಸಮಸ್ಯೆಯನ್ನು ಬಿಜೆಪಿ ಸರಕಾರ ಪರಿಹರಿಸಿದ ಪರಿಣಾಮ ಇದೀಗ ಹಕ್ಕುಪತ್ರ ನೀಡುವಂತಾಗಿದೆ. ಸರಕಾರಿ ಜಾಗದಲ್ಲಿ ಮನೆ ಮಾಡಿಕೊಂಡಿರುವ ಅರ್ಹ ಕುಟುಂಬಗಳಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಜರುಗಲಿದೆ
ಕಾರ್ಕಳ: ಹಕ್ಕುಪತ್ರ ವಿತರಣಾ ಕಾರ್ಯಕ್ರಮ






























































