ನಿಟ್ಟೆ : ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸ್ನಾತಕೋತ್ತರ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನಡೆದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ‘ಯಕ್ಷೋತ್ಸವ ೨೦೨೩’ ದಲ್ಲಿ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಆಫ್ ಕ್ಯಾಂಪಸ್ ಸೆಂಟರ್ ನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಲಾಸಂಗಮ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ನಿಟ್ಟೆ ಕಾಲೇಜಿನ ವಿದ್ಯಾರ್ಥಿ ವರುಣ್ ಆಚಾರ್ಯ ಪ್ರಥಮ ಸ್ಥಾನವನ್ನು ಹಾಗೂ ಕು. ಸರಿತಾ ರಾವ್ ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.
ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ – ನಿಟ್ಟೆ ಕಾಲೇಜು ಪ್ರಥಮ






























































