ಕಾರ್ಕಳ : ಕುಕ್ಕುಂದೂರು ಗ್ರಾಮದ ಬೈರ್ಲಬೆಟ್ಟುವಿನ ಬೈಲುಬದಿಯ ಹಾಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಾ.21ರಂದು ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದೆ. ಕೆಲಸಕ್ಕೆಂದು ಕಾರ್ಕಳಕ್ಕೆ ವಲಸೆ ಬಂದಿರುವ ವ್ಯಕ್ತಿಯ ಶವವಾಗಿರಬಹುದೆಂದು ಅನುಮಾನಿಸಲಾಗಿದೆ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಶವವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪರಿಚಿತ ವ್ಯಕ್ತಿಯ ಕೊಳೆತ ಶವವೊಂದು ಪತ್ತೆ






















