ಬಾಲಿವುಡ್‌ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ

ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ನಿರ್ದೇಶಕ

ಮುಂಬಯಿ : ಬಾಲಿವುಡ್‌ನ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ (68) ಇಂದು ನಸುಕಿನ ವೇಳೆ ನಿಧನರಾಗಿದ್ದಾರೆ. ಪರಿಣಿತ, ಲಗಾ ಚುನರಿ ಮೇ ದಾಗ್‌, ಮರ್ದಾನಿ, ಹೆಲಿಕಾಪ್ಟರ್‌ ಏಲದಂಥ ಜನಪ್ರಿಯ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.
ಜಾಹೀರಾತು ಚಿತ್ರ ನಿರ್ದೇಶಕರಾಗಿ ಸುದೀರ್ಘ 17 ವರ್ಷ ದುಡಿದು ಬಳಿಕ ಪ್ರದೀಪ್‌ ಸರ್ಕಾರ್‌ ಬಾಲಿವುಡ್‌ಗೆ ಬಂದಿದ್ದರು. ಹಲವು ನೆನಪಿನಲ್ಲಿ ಉಳಿಯುವಂಥ ಜಾಹೀರಾತುಗಳನ್ನು ಅವರು ನಿರ್ದೇಶಿಸಿದ್ದರು. ಪರಿಣಿತ ಅವರು ನಿರ್ದೇಶಿಸಿದ ಮೊದಲ ಚಿತ್ರ. ಮೊದಲ ಚಿತ್ರವೇ ರಾಷ್ಟ್ರ ಪ್ರಶಸ್ತಿಯ ಮನ್ನಣೆಗೆ ಪಾತ್ರವಾಗಿತ್ತು.



































































































error: Content is protected !!
Scroll to Top