ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಎಎಪಿ, ಕೆಆರ್ಪಿಪಿ ಕೂಡ ಕಮಾಲ್ ಮಾಡಲು ತಯಾರಿ ನಡೆಸಿದ್ದು, ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಂದೇಶ ರವಾನಿಸಲಾಗಿದೆ. ಮಾ. 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.
ಚುನಾವಣೆ ಆಯೋಗದಿಂದ ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ

























