ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ರಾಜ್ಯ ಸರಕಾರ ಪತ್ರ

ಬೆಂಗಳೂರು : ಎಸ್​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರಕಾರ ಪತ್ರ ಬರೆದಿದೆ. ರಾಜ್ಯ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾ ಅವರಿಗೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆ ಮೂಲಕ ಮೀಸಲಾತಿ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಶೆಡ್ಯೂಲ್ 9 ಸೇರ್ಪಡೆ ಮಾಡಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ.
ಫೆ. 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು ಅಧಿನಿಯಮ, 2022 ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿತ್ತು. ಮೀಸಲಾತಿ ಹೆಚ್ಚಳದ ಈ ವಿಧೇಯಕಕ್ಕೆ 2023ರ ಜನವರಿ 11ರಂದು ರಾಜ್ಯಪಾಲರಿಂದ ಒಪ್ಪಿಗೆ ಪಡೆಯಲಾಗಿತ್ತು. ಅದರಂತೆ ರಾಜ್ಯ ಸರಕಾರ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15ರಿಂದ ಶೇ.17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ ಶೇ.7ಕ್ಕೆ ಹೆಚ್ಚಳ ಮಾಡಿ ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದಿತ್ತು. ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡಬೇಕಾಗಿತ್ತು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು.



































































































error: Content is protected !!
Scroll to Top