ಕಾಂಗ್ರೆಸ್‌ ಕಾರ್ಯಕರ್ತನ ಕಪಾಳಕ್ಕೆ ಹೊಡೆದ ಸಿದ್ದರಾಮಯ್ಯ

ಟಿಕೆಟ್‌ ಕೇಳಲು ಬಂದ ಶಾಸಕನ ಅಭಿಮಾನಿಗೆ ಕಪಾಳ ಮೋಕ್ಷ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್​ ಕಾರ್ಯಕರ್ತರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವೀಡಿಯೊ ತುಣುಕೊಂದು ಭಾರಿ ವೈರಲ್‌ ಆಗಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಹರಿಹರದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಶಾಸಕ ರಾಮಪ್ಪ ಅವರಿಗೆ ಟಿಕೆಟ್​ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಶುಕ್ರವಾರ ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಾಸಕ ರಾಮಪ್ಪ ಮತ್ತೆ ಅದೇ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಅವರ ಬೆಂಬಲಿಗರು ಇಂದು ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ತಮ್ಮ ನಾಯಕನಿಗೆ ಟಿಕೆಟ್​ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ, ಟಿಕೆಟ್ ಆಮೇಲೆ ನೋಡೋಣ, ಸರ್ವೆ ರಿಪೋರ್ಟ್ ಬರಲಿ ಎಂದಿದ್ದಾರೆ.
ಆದರೂ ಸುಮ್ಮನಾಗದ ಶಾಸಕ ರಾಮಪ್ಪ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಸುತ್ತುವರಿದರು. ಈ ವೇಳೆ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ತಮ್ಮ ನಾಯಕನಿಗೆ ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ಕಾರ್ಯಕರ್ತನೋರ್ವನ ಕಾಪಾಳಕ್ಕೆ ಹೊಡೆದಿದ್ದಾರೆ.



















































error: Content is protected !!
Scroll to Top