ರಸ್ತೆಯಲ್ಲಿ ದೇವರಿಗೆ ದೀರ್ಘದಂಡ ನಮಸ್ಕಾರ ಹಾಕುವಾಗ ನಡೆದ ಅಪಘಾತ
ಬೆಳಗಾವಿ: ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.
ಐಶ್ವರ್ಯಾ ಅಥಣಿ ತಾಲೂಕಿನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಯುವತಿಯ ತಲೆಗೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು.



















