ಉಜ್ವಲ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ

ವರ್ಷದಲ್ಲಿ 12 ಸಿಲಿಂಡರ್‌ಗೆ ಸಿಗಲಿದೆ ಸಹಾಯಧನ

ಹೊಸದಿಲ್ಲಿ : ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಸಿಗಲಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ. ಸಬ್ಸಿಡಿ ನೀಡಲು ಅನುಮೋದನೆ ನೀಡಿದೆ. ಈ ಯೋಜನೆಗೆ 9.59 ಕೋಟಿ ಫಲಾನುಭವಿಗಳಿದ್ದಾರೆ. ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.



















































































error: Content is protected !!
Scroll to Top