ಡಾ. ಜಿ. ರಾಮಕೃಷ್ಣ ಆಚಾರ್ ಅವರಿಗೆ ಅಭಿನಂದನೆ

ಕಾರ್ಕಳ : ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್‌ ಪದವಿ ಪಡೆದ ಉದ್ಯಮಿ, ಎಸ್‌ ಕೆಎಫ್‌ ಸಮೂಹ ಸಂಸ್ಥೆ ಮತ್ತು ಮುನಿಯಾಲಿನ ಸಂಜೀವಿನಿ ಫಾರ್ಮ್‌ ದೇಶಿಯ ಗೋತಳಿಗಳ ಅಭಿವೃದ್ಧಿ ಕೇಂದ್ರದ ಸಂಸ್ಥಾಪಕ ಡಾ.ಜಿ. ರಾಮಕೃಷ್ಣ ಆಚಾರ್‌ ಅವರನ್ನು ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲೂಕು ಘಟಕದ ವತಿಯಿಂದ ಮುನಿಯಾಲು ಸಂಜೀವಿನಿ ಫಾರ್ಮ್‌ನಲ್ಲಿ ಭಾನುವಾರ ಅಭಿನಂದಿಸಲಾಯಿತು.

ಕ.ಸಾ.ಪ. ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಭಂಡಾರಿ, ಗೌರವ ಕಾರ್ಯದರ್ಶಿಗಳಾದ ಡಾ. ಪ್ರವೀಣ್ ಕುಮಾರ್ ಹಾಗೂ ಮಂಜುನಾಥ ಕೆ. ಶಿವಪುರ, ಉಪನ್ಯಾಸಕ ಬಾಲಚಂದ್ರ ಹೆಬ್ಬಾರ್, ಹೆಬ್ರಿ ಗ್ರಾ.ಪಂ. ಸದಸ್ಯ ಜನಾರ್ಧನ್, ಚೈತನ್ಯ ಮಹಿಳಾ ಮಂಡಲದ ಅಧ್ಯಕ್ಷ ವಿದ್ಯಾ ಜನಾರ್ಧನ್, ವಿದ್ಯಾಭಾರತಿ ಕಾರ್ಯದರ್ಶಿ ಮಹೇಶ್ ಹೈಕಾಡಿ, ವಿಪ್ರ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶೋಭಾ ಕಲ್ಕೂರ್ ಮೊದಲಾದವರು ಈ ಸಂದರ್ಭದಲ್ಲಿದ್ದರು. ‌









































































































error: Content is protected !!
Scroll to Top