ಲೋಕಾಯುಕ್ತ ಬಲೆಗೆ ಬಿದ್ದ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಮಾ.27ರಂದು ಬಂಧಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರಕಾರಿ ಕಾರ್ಯಕ್ರಮ‌ದಲ್ಲಿ ಭಾಗಿಯಾಗಿದ್ದ ಅವರು, ಕ್ಷಣಮಾತ್ರದಲ್ಲಿ ಅಲ್ಲಿಂದ ತೆರಳಿ ನಾಪತ್ತೆಯಾಗಿದ್ದರು. ಅವರನ್ನು ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡ ಅವರ ನಿವಾಸಕ್ಕೆ ತೆರಳಿದ್ದು, ಅಷ್ಟರಲ್ಲೇ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಲೋಕಾಯುಕ್ತ ಪೊಲೀಸರು ಬಂಧಿಸಿದರು.































































































































error: Content is protected !!
Scroll to Top