ಐಸ್‌ಕ್ರೀಮ್‌ ದಾಸ್ತಾನು ಗೋದಾಮು ಬೆಂಕಿಗಾಹುತಿ

ನಂದಿನಿ ಐಸ್‌ಕ್ರೀಮ್‌ ದಾಸ್ತಾನು ಇಟ್ಟಿದ್ದ ಗೋದಾಮು

ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಎಂಬಲ್ಲಿ ಐಸ್‌ಕ್ರೀಮ್ ತಯಾರಿಕಾ ಘಟಕದಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಕೋಟ್ಯಂತರ ರೂಪಾಯಿ ನಷ್ಟ ಉಂಟಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಕಟ್ಟಡದಲ್ಲಿ ನಂದಿನಿ ಐಸ್‌ಕ್ರೀ‍ಮ್ ಉತ್ಪನ್ನಗಳನ್ನು ದಾಸ್ತಾನು ಇಡಲಾಗಿತ್ತು. ಇದರ ಜತೆಗೆ ಐಸ್‌ಕ್ರೀಮ್ ತಯಾರಿಕಾ ಘಟಕಕ್ಕೂ ಬೆಂಕಿ ಹಬ್ಬಿದೆ.
ಸ್ಥಳಕ್ಕೆ ಧಾವಿಸಿ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಸಾವುನೋವು ಸಂಭವಿಸಿಲ್ಲ. ಅಗ್ನಿ ದುರಂತದಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.































































































































error: Content is protected !!
Scroll to Top