ಕಾರ್ಕಳ : ವಿಧಾನಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮಾದರಿ ಸಂಹಿತೆ ಜಾರಿಗೊಂಡ ಹಿನ್ನೆಲೆ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿದ್ದ ಜಾಹೀರಾತು ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಲಾಯಿತು. ಜಿಲ್ಲಾಧಿಕಾರಿಗಳ ಆದೇಶದನ್ವಯ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ ನೇತೃತ್ವದಲ್ಲಿ ಗುರುವಾರ ಪುರಸಭಾ ವ್ಯಾಪ್ತಿಯ 23 ವಾರ್ಡ್ ಗಳಲ್ಲಿದ್ದ ಸುಮಾರು 41 ಬ್ಯಾನರ್, ಬಂಟಿಂಗ್ಸ್ ಅನ್ನು ಪುರಸಭಾ ಸಿಬ್ಬಂದಿ ತೆರವುಗೊಳಿಸಿದರು.
ಪುರಸಭಾ ವ್ಯಾಪ್ತಿಯಲ್ಲಿ 41 ಬ್ಯಾನರ್ ತೆರವು






























































