ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

ಮಂಗಳೂರು : ದೈವ ನರ್ತಕರೊಬ್ಬರು ದೈವದ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ. 30 ರಂದು ಕಾಣಿಯೂರು ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಸಂಭವಿಸಿದೆ. ಮಾಲೆಂಗ್ರೀಯ ಕಾಂತು ಅಜಿಲ ಎಂಬುವವರೇ ಮೃತಪಟ್ಟವರು. ಇವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುವಾರ ಮುಂಜಾನೆ ಕಾಣಿಯೂರು ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೋತ್ಸವ ನಡೆಯುತ್ತಿದ್ದು, ದೈವ ನರ್ತನ ಮಾಡುತ್ತಿರುವಾಗಲೇ ಕಾಂತು ಅಜಿಲ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಈ ವೇಳೆಗಾಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.









































































































error: Content is protected !!
Scroll to Top