ಪ್ರಧಾನಿ ಕಾರ್ಯಾಲಯ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿಯ ಪದವಿ ಪ್ರಮಾಣಪತ್ರ ಕೇಳಿದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ. ಪ್ರಧಾನಿ ಅವರ ಪದವಿ ವಿವರವನ್ನು ಒದಗಿಸಲು ಆದೇಶಿಸುವಂತೆ ದಿಲ್ಲಿ ಸಿಎಂ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಿಐಸಿಗೆ ಅರ್ಜಿ ಸಲ್ಲಿಸಿದ್ದರು. ಆ ಪ್ರಕಾರ ಮೋದಿಯ ಎಂಎ ಪದವಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ವಿವರ ಒದಗಿಸಲು ಗುಜರಾತ್ ವಿಶ್ವವಿದ್ಯಾಲಯಕ್ಕೆ 2016ರಲ್ಲಿ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನಿರ್ದೇಶನ ನೀಡಿತ್ತು.
ಈಗ ಕೇಜ್ರಿವಾಲ್ ಅವರಿಗೆ 25 ಸಾವಿರ ರೂ ದಂಡ ವಿಧಿಸಿರುವ ಗುಜರಾತ್ ಹೈಕೋರ್ಟ್, ಅದನ್ನು ಗುಜರಾತ್ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇರಿಸಬೇಕು ಎಂದು ಸೂಚನೆ ನೀಡಿದೆ. ಈ ತೀರ್ಪಿಗೆ ತಡೆ ನೀಡಲು ಕೂಡ ನ್ಯಾಯಮೂರ್ತಿ ಬೈರನ್ ವೈಷ್ಣವ್ ಅವರ ಪೀಠ ನಿರಾಕರಿಸಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ಮೋದಿ ಅವರ ಸ್ನಾತಕೋತ್ತರ ಪದವಿಯ ವಿವರಗಳನ್ನು ನೀಡುವಂತೆ 2016ರಲ್ಲಿ ಗುಜರಾತ್ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಸೂಚನೆ ನೀಡಿತ್ತು.























