ಗ್ರಾಮೀಣ ಜನತೆಯ ಆರೋಗ್ಯ ವೃದ್ಧಿಯಲ್ಲಿ ವೈದ್ಯಕೀಯ ಶಿಬಿರ ಸಹಕಾರಿ – ಡಾ. ಚಂದ್ರಿಕಾ ಕಿಣಿ

ಹೆಬ್ರಿ : ಗ್ರಾಮೀಣ ಜನತೆಯಲ್ಲಿ ಆರೋಗ್ಯ ಸಂಬಂಧಿಸಿದಂತೆ ಜಾಗೃತಿ ಮೂಡಿಸುವಲ್ಲಿ ವೈದ್ಯಕೀಯ ಶಿಬಿರಗಳ ಪಾತ್ರ ಮಹತ್ವವಾದುದು ಎಂದು ದೊಂಡೇರಂಗಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಿಕಾ ಅಭಿಪ್ರಾಯಪಟ್ಟರು. ಅವರು ಮಾ. 31 ರಂದು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆದ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಶ್ರೀ ಕ್ಷೇತ್ರ ಎಳ್ಳಾರೆಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯೋಗೀಶ್ ಮಲ್ಯ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ. ದಿವ್ಯಾ ಪೈ, ಸ್ಥಳೀಯ ವೈದ್ಯ ಡಾ. ಪ್ರಮೋದ್ ಕುಮಾರ್ ಹೆಗ್ಡೆ, ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಸೀತಾರಾಮ ಕಡಂಬ, ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಉಷಾ ನಾಯಕ್, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಸಂಸ್ಥಾಪಕ ದೇವೇಂದ್ರ ಕಾಮತ್, ದೊಂಡೇರಂಗಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಹರೀಶ್ ದುಗ್ಗನ್ ಬೆಟ್ಟು ಉಪಸ್ಥಿತರಿದ್ದರು. ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರ್ವಹಿಸಿದರು.









































































































error: Content is protected !!
Scroll to Top