ಕಾರ್ಕಳ : ಕೆರೆಯ ನೀರಿನ ಮಟ್ಟ ನೋಡಲು ಹೋದವರು ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಮಾ. 30ರಂದು ಮುಡಾರು ಗ್ರಾಮದಲ್ಲಿ ಸಂಭವಿಸಿದೆ. ನರಸಿಂಹ ಭಟ್ (67) ಎಂಬುಬುವವರೇ ಮೃತಪಟ್ಟ ದುರ್ದೈವಿ. ನಿವೃತ್ತ ಶಿಕ್ಷಕರಾಗಿದ್ದ ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮನೆಯ ಸಮೀಪದ ತೋಟದ ಕೆರೆಯ ನೀರಿನ ಮಟ್ಟ ನೋಡಲೆಂದು ಹೋಗಿದ್ದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಕೆರೆಯಿಂದ ಮೇಲಕ್ಕೆತ್ತಿ ಚಿಕಿತ್ಸೆಗಾಗಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದಾಗ ಪರೀಕ್ಷಿಸಿದ ವೈದ್ಯರು ನರಸಿಂಹ ಅವರು ಮೃತಪಟ್ಟಿರುವುದನ್ನು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕೆರೆಗೆ ಬಿದ್ದು ವ್ಯಕ್ತಿ ಸಾವು

























