ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ಸೇವೆ ಸಮಯ ಬದಲಾವಣೆ

ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರ – ಅಪರಾಹ್ನ ಗಂಟೆ 3.30ರಿಂದ ಸಂಜೆ 6.30ರ ವರೆಗೆ ತಜ್ಞ ವೈದ್ಯರು ಲಭ್ಯ

ಕಾರ್ಕಳ : ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯನ್ನು ಹೊಸ ಹೊರರೋಗಿ ವಿಭಾಗ, ಶಸ್ತ್ರ ಚಿಕಿತ್ಸಾ ಕೊಠಡಿ ಮತ್ತು ಹಲವು ಸೌಲಭ್ಯಗಳ ಸೇರಿಸಿ ಮೇಲ್ದರ್ಜೆಗೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತಜ್ಞ ವೈದ್ಯರ ಸೇರ್ಪಡೆಯೊಂದಿಗೆ 24×7 ಅಪಘಾತ ಮತ್ತು ತುರ್ತು ಚಿಕಿತ್ಸಾ ಸೌಲಭ್ಯವನ್ನು ಆರಂಭಿಸಲಿದ್ದೇವೆ. ಇದೀಗ ಸಾರ್ವಜನಿಕರ ಅಪೇಕ್ಷೆ ಮೇರೆಗೆ ಮತ್ತು ಅವರ ಅನುಕೂಲಕ್ಕಾಗಿ ಆಸ್ಪತ್ರೆಯ ಹೊರರೋಗಿ ವಿಭಾಗದ ವೈದ್ಯರ ಸಮಾಲೋಚನೆ ಸಮಯವನ್ನು ಬದಲಾಯಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ.
ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ಮತ್ತು ಅಪರಾಹ್ನ ಗಂಟೆ 3.30ರಿಂದ ಸಂಜೆ 6.30ರ ವರೆಗೆ ತಜ್ಞ ವೈದ್ಯರು ಸಮಾಲೋಚನೆಗೆ ಲಭ್ಯವಿರುತ್ತಾರೆ. ಪರಿಷ್ಕೃತ ಹೊರರೋಗಿ ಸಮಯ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಬದಲಾವಣೆಗಳೊಂದಿಗೆ ರೋಗಿಗಳು ತಮ್ಮ ದೈನಂದಿನ ದಿನಚರಿಯಲ್ಲಿ ವ್ಯತ್ಯಾಸ ಮಾಡಿಕೊಳ್ಳದೆ ಅವರ ಅನುಕೂಲಕ್ಕೆ ತಕ್ಕಂತೆ ವೈದ್ಯಕೀಯ ಸೇವೆಗಳನ್ನು ಪಡೆಯಬಹುದು ಎಂದು ಡಾ| ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ.
ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯು ಸಮುದಾಯಕ್ಕೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಸದಾ ಮುಂಚೂಣಿಯಲ್ಲಿದೆ. ಅತ್ಯಾಧುನಿಕ ಸೌಲಭ್ಯಗಳ ಸೇರ್ಪಡೆಯೊಂದಿಗೆ ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ಒದಗಿಸಲು ಮೀಸಲಾಗಿರುವ ಹೆಚ್ಚು ನುರಿತ ವೈದ್ಯರು ಮತ್ತು ಸಿಬ್ಬಂದಿಗಳ ತಂಡವನ್ನು ಹೊಂದಿದೆ ಎಂದು ಡಾ ಕೀರ್ತಿನಾಥ ಬಲ್ಲಾಳ ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 08258 230583 ಅಥವಾ 9731601150 ಸಂಪರ್ಕಿಸಬಹುದು

































































































error: Content is protected !!
Scroll to Top