ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್ ಏ. 2023ರ ಅಧಿಕೃತ ಅಧಿಸೂಚನೆ ಹೊರಡಿಸಿದೆ. 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏ.17ರಿಂದ ಪ್ರಾರಂಭಗೊಂಡು ಮೇ17 ಕೊನೆಯ ದಿನವಾಗಿದ್ದು, ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ. ಇ -ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಮೇ20 ಕೊನೆಯ ದಿನವಾಗಿದೆ.

KFCSC ನಿಯಮಗಳ ಅನುಸಾರ, ನೇಮಕಾತಿಗೆ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಗಣಿಸಲಾಗುತ್ತದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಇರಲಿದೆ. ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KFCSC ಹುದ್ದೆಯ ವಿವರಗಳು
ಸಹಾಯಕ ವ್ಯವಸ್ಥಾಪಕ- 10
ಹಿರಿಯ ಸಹಾಯಕರು- 57
ಹಿರಿಯ ಸಹಾಯಕರು (ಖಾತೆಗಳು)- 33
ಕ್ವಾಲಿಟಿ ಇನ್ಸ್ಪೆಕ್ಟರ್- 23
ಕಿರಿಯ ಸಹಾಯಕರು- 263
ವೇತನ: ರೂ.11600-43200/- ಪ್ರತಿ ತಿಂಗಳು
KFCSC ಅಧಿಸೂಚನೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್: kfcsc.karnataka.gov.in ಭೇಟಿ ನೀಡಬಹುದು























































































































error: Content is protected !!
Scroll to Top