ಅಗತ್ಯವಿರುವೆಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ – ಮುಖ್ಯಾಧಿಕಾರಿ
ಕಾರ್ಕಳ : ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ವಿಪಕ್ಷ ಸದಸ್ಯರು ಮುಖ್ಯಾಧಿಕಾರಿ ಅವರನ್ನು ಆಗ್ರಹಿಸಿದರು.
ಎ. 6ರಂದು ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ ಅವರನ್ನು ಭೇಟಿ ಮಾಡಿ, ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಎಲ್ಲೆಲ್ಲಿದೆ ಎಂದು ಗುರುತಿಸಿ ಆ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವಂತೆ ಮನವಿ ಮಾಡಿಕೊಂಡರು. ಈ ವೇಳೆ ಪ್ರತಿಕ್ರಿಯಿಸಿದ ರೂಪ ಶೆಟ್ಟಿ ಅವರು ಅಗತ್ಯವಿರುವ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದರು. ವಿಪಕ್ಷ ನಾಯಕ ಅಶ್ಫಕ್ ಅಹಮ್ಮದ್, ಸದಸ್ಯರಾದ ಶುಭದರಾವ್, ಪ್ರವೀಣ್ ಶೆಟ್ಟಿ, ಹರೀಶ್ ಕುಮಾರ್, ಪ್ರತಿಮಾ ರಾಣೆ, ಪ್ರಭಾ ಕಿಶೋರ್, ರೆಹಮತ್ ಮೊದಲಾದವರು ಉಪಸ್ಥಿತರಿದ್ದರು.




















