ನೀತಿ ಸಂಹಿತೆ ಉಲ್ಲಂಘನೆ : ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿರುವ ವಿಚಾರವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರೇಣುಕಾಚಾರ್ಯ ಶಿವಾನಂದ ಸರ್ಕಲ್ ಬಳಿ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಕಾರ್ಯಕರ್ತರ ಜೊತೆಗೆ ಸಭೆ ನಡೆಸಿದ್ದರು. ಈ ಸಭೆಯ ವೇಳೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದರು. ಅನುಮತಿ ಪಡೆಯದೆ ಈ ಸಭೆ ಆಯೋಜನೆ ಮಾಡಲಾಗಿತ್ತು, ಮಾತ್ರವಲ್ಲ ಆಯೋಜಕರು ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಕೂಡ ಮಾಡಿದ್ದರು. ರೇಣುಕಾಚಾರ್ಯ ಸ್ಟೇಜ್ ಮೇಲೆ ಮಾತನಾಡುತ್ತಿದ್ದ ವೇಳೆಯೇ ಮೈಕ್ ಕಸಿದುಕೊಂಡು ಅಧಿಕಾರಿಗಳು ಕಾರ್ಯಕ್ರಮ ನಿಲ್ಲಿಸಿದ್ದರು. ಚುನಾವಣಾ ಅಧಿಕಾರಿ ವಿಜಯ್ ರಿಂದ ಈ ಬಗ್ಗೆ ದೂರು ದಾಖಲಾಗಿದ್ದು, ಶಾಸಕ ರೇಣುಕಾಚಾರ್ಯ ಮತ್ತು ಸಂತೋಷ ಎಂಬುವವರ ಮೇಲೆ ದೂರು ದಾಖಲು ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.



































































































error: Content is protected !!
Scroll to Top