ಕಾಪು ಕಾಂಗ್ರೆಸ್‌ ಪರಿಶಿಷ್ಟ ಜಾತಿ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ಜಯ ಕೌಡೂರು ನೇಮಕ

ಉಡುಪಿ : ಕರ್ನಾಟಕ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯ್‌ ಕುಮಾರ್ ಸೊರಕೆ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಕುಮಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್‌ ಕೊಡವೂರು ಮುಂದಾಳುತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ, ಕಾಂಗ್ರೆಸ್ ಪರಿಶಿಷ್ಟ ಜಾತಿ ಪಂಗಡ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ನಿವೃತ್ತ ಪಿ.ಎಸ್.ಐ ಜಯ ಕೌಡೂರು ಇವರನ್ನು ನೇಮಕ ಮಾಡಲಾಗಿದೆ. ಇವರು ಕಾಪು, ಉಡುಪಿ, ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ ಪಿ.ಎಸ್.ಐ ಆಗಿ ಈಗಾಗಲೇ ಕರ್ತವ್ಯ ನಿರ್ವಹಿಸಿದ್ದರು. ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ಕಾರ್ಯದರ್ಶಿ ಮೊಹಮ್ಮದ್ ಫಾರೂಕ್ ಚಂದ್ರನಗರ, ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಸದಸ್ಯ ಸಂಶುದ್ದೀನ್ ಕರಂದಾಡಿೀ ಸಂದರ್ಭದಲ್ಲಿ ಉಪಸ್ಥಿತರಿದ್ದರು.

















































error: Content is protected !!
Scroll to Top