ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂಗೆ ಕೊಲೆ ಬೆದರಿಕೆ : ಶಾಲಾ ಬಾಲಕನ ಬಂಧನ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ಲಖನೌದ ಶಾಲಾ ಬಾಲಕನನ್ನು ನೋಯ್ಡಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರ ಮೂಲದ 16 ವರ್ಷದ ಬಾಲಕನನ್ನು ಇಂದು ಬೆಳಗ್ಗೆ ಲಖನೌದ ಚಿನ್ಹಾಟ್ ಪ್ರದೇಶದಲ್ಲಿ ವಶಕ್ಕೆ ಪಡೆದು, ನೋಯ್ಡಾಗೆ ಕರೆತರಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ರಜನೀಶ್ ವರ್ಮಾ ಹೇಳಿದ್ದಾರೆ. ಈ ಬಾಲಕ 11ನೇ ತರಗತಿ ಪೂರ್ಣಗೊಳಿಸಿದ್ದು, 12ನೇ ತರಗತಿಗೆ ಪ್ರವೇಶ ಪಡೆದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

















































error: Content is protected !!
Scroll to Top