ಕಾರ್ಕಳ : ನಾಲ್ಕುಸ್ಥಾನ ನಂದಳಿಕೆಯ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಿರಿಜಾತ್ರೆ ಎ.6 ರಂದು ಸಂಪನ್ನಗೊಂಡಿತು. ಬೆಳಿಗ್ಗೆ 8 ರಿಂದ ಶ್ರೀ ಉರಿಬ್ರಹ್ಮ ದೇವರ ಸ್ವರ್ಣ ಪಾದುಕೆ, ಶ್ರೀ ಅಬ್ಬಗ-ದಾರಗರ ಚೆನ್ನೆಮಣೆಗಳ ಸಾಲಂಕೃತ ಮೆರವಣಿಗೆ ಪ್ರಾಕ್ತನ ಪದ್ಧತಿಯಂತೆ ಪರ್ಯಟಿಸಿ ಮಧ್ಯಾಹ್ನ ಆಲಡೆಯಲ್ಲಿ ಶ್ರೀ ಅಣ್ಣಪ್ಪ ದರ್ಶನ, ಹಸಿರು ಮಡಲು ಚಪ್ಪರ ಕಟ್ಟೆ ಪೂಜಾ ಸೇವೆ, ಶ್ರೀ ದೇವರ ಮಹೋತ್ಸವ ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಚಾವಡಿ ಅರಮನೆ ಎನ್. ಸುಂದರ ರಾಮ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ, ನಂದಳಿಕೆ ಚಾವಡಿ ಅರಮನೆ ಸುಹಾಸ್ ಹೆಗ್ಡೆಯವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು.


























