ಕಾರ್ಕಳ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಎ. 9ರ ಭಾನುವಾರ ಪೂರ್ವಾಹ್ನ 10:30 ಗಂಟೆಯಿಂದ ಕಾರ್ಕಳ ಶ್ರೀ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರು ಸಮಾವೇಶದಲ್ಲಿ ಸಕ್ರಿಯವಾಗಿ ಭಾಗವಹಿಸಲಿರುವರು.
ಸಚಿವ ವಿ. ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಪಕ್ಷದ ಹಿರಿಯ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರುವರೆಂದು ಕಾರ್ಕಳ ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿಯ ಮಾಧ್ಯಮ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎ. 9 : ಕಾರ್ಕಳದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ









































