ಬಂಡೀಪುರ ಅಭಯಾರಣ್ಯದಲ್ಲಿ ಮೋದಿ ಹುಲಿ ಸಫಾರಿ

ದಟ್ಟ ಕಾಡಿನಲ್ಲಿ ಎರಡು ತಾಸು ಸಂಚಾರ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ 2 ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಂಚಾರ ನಡೆಸಲಿದ್ದಾರೆ. ತಮಿಳುನಾಡಿನ ಮುದುಮಲೈ ಅರಣ್ಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೆಳ್ಳಿ-ಬೊಮ್ಮನ್​ ದಂಪತಿಯನ್ನು ಭೇಟಿಯಾಗಿ ಸನ್ಮಾನಿಸಲಿದ್ದಾರೆ. ದಿ ಎಲಿಫೆಂಟ್​ ವಿಸ್ಪರರ್ಸ್ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ. ಬೆಳ್ಳಿ-ಬೊಮ್ಮನ್​ ದಂಪತಿ ಸಾಕ್ಷ್ಯಚಿತ್ರದ ಪಾತ್ರಧಾರಿಗಳಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹೆಲಿಪ್ಯಾಡ್​ನಿಂದ ರಸ್ತೆ ಮುಖಾಂತರ ಬಂಡೀಪುರ ಕ್ಯಾಂಪ್​ಗೆ ಆಗಮಿಸಿದರು. ಈ ವೇಳೆ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿದರು.ನಂತರ ಬಂಡೀಪುರ ಕ್ಯಾಂಪಸ್​​ನಿಂದ ಸುಮಾರು 2 ತಾಸು ಅರಣ್ಯದಲ್ಲಿ ಸಫಾರಿ ಪ್ರಾರಂಭಿಸಿದರು.



































































































error: Content is protected !!
Scroll to Top