ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ಚುನಾವಣೆಗಳಿಂದ ತಾವು ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ಹಾಗಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ- ಮುಖ್ಯಮಂತ್ರಿಯಾಗುವವರೆ ಗೌರವದ ಸ್ಥಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಈಶ್ವರಪ್ಪನವರ ಶಸ್ತ್ರತ್ಯಾಗದ ನಿರ್ಧಾರದಿಂದ, ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿದ ಬಿಜೆಪಿ ನಾಯಕರ ಸಂಖ್ಯೆ ನಾಲ್ಕಕ್ಕೇರಿದೆ. ಕಳೆದ ವರ್ಷ, ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದರು. ಇತ್ತೀಚೆಗೆ, ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದರು. ಮೂರು ದಿನಗಳ ಹಿಂದಷ್ಟೇ, ಮಾಜಿ ಸಚಿವರೂ ಆಗಿರುವ, ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾದ ಎಸ್.ಎ. ರವೀಂದ್ರನಾಥ್ ಅವರು ಚುನಾವಣೆಗಳಿಂದ ದೂರ ಸರಿಯುವಾಗಿ ಪ್ರಕಟಿಸಿದ್ದರು. ಇದೀಗ, ಈಶ್ವರಪ್ಪನವರು ಅದೇ ನಿರ್ಧಾರವನ್ನು ಪ್ರಕಟಿಸಿದ್ದಾರೆ.









































































































error: Content is protected !!
Scroll to Top