ಟಿಕೆಟ್‌ ಘೋಷಣೆ ವಿಚಾರದಲ್ಲಿ ಬಿಜೆಪಿಯಲ್ಲಿ ಹೆಚ್ಚಿದ ಅಸಮಾಧಾನ

ಸೋಲಿಲ್ಲದ ಸರದಾರ ಎಸ್.‌ ಅಂಗಾರ ರಾಜಕೀಯ ನಿವೃತ್ತಿ ಘೋಷಣೆ

ಕಾರ್ಕಳ : ವಿಧಾನ ಸಭಾ ಚುನಾವಣೆಯ ಟಿಕೆಟ್‌ ಘೋಷಣೆಯ ಹಿನ್ನಲೆಯಲ್ಲಿ ಅಸಮಾಧಾನಗೊಂಡ ಪಕ್ಷದ ಅಭ್ಯರ್ಥಿಗಳು ಚುನಾವಣಾ ನಿವೃತ್ತಿ ಘೋಷಣೆ ತೀರ್ಮಾನದೊಂದಿಗೆ ಬಿಜೆಪಿ ಪಕ್ಷಕ್ಕೆ ಶಾಕ್ ನೀಡುತ್ತಿದ್ದಾರೆ. ಬಿಜೆಪಿಯ ಹಿರಿಯ ಮುಖಂಡರು ಈಶ್ವರಪ್ಪ ಸೇರಿದಂತೆ ಕೆಲವು ಮುಖಂಡರುಗಳು ರಾಜಕೀಯ ನಿವೃತ್ತಿ ಘೋಷಣೆ ಮಂಡಿದ ಬೆನ್ನಲ್ಲೇ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

6 ಬಾರಿ ಶಾಸಕರಾಗಿ ಆಯ್ಕೆ
1994ರಿಂದ ಸುಳ್ಯ ಕ್ಷೇತ್ರವನ್ನು ಆಳುತ್ತಿರುವ ಬಿಜೆಪಿ ಪಕ್ಷಕ್ಕೆ ಎಸ್‌. ಅಂಗಾರ ಒಬ್ಬರೇ ನಾಯಕ. 1994, 1999, 2004, 2008, 2013, 2018 ಹೀಗೆ ಸತತ 6 ಚುನಾವಣೆಗಳಲ್ಲಿ ಬಿಜೆಪಿಯ ಸಚಿವ ಅಂಗಾರ ಭರ್ಜರಿ ಗೆಲುವು ಸಾಧಿಸಿದ್ದರು. ಇನ್ನು 2013ರಲ್ಲಿ ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಾಗ ಗೆದ್ದ ಏಕೈಕ ವ್ಯಕ್ತಿ ಎಂದರೆ ಅದು ಅಂಗಾರ. ಜಿಲ್ಲೆಯಲ್ಲಿ ಬಿಜೆಪಿಯ ಮಾನ ಉಳಿಸಿದ್ದು ಕೂಡ ಇವರೇ. ಅದಕ್ಕೆ ಅಂಗಾರ ಯಾವತ್ತೂ ಸುಳ್ಯದ ಬಂಗಾರ ಎಂಬ ಮಾತಿದೆ.

ಚುನಾವಣಾ ಪ್ರಚಾರ ಕಣದಿಂದಲೂ ದೂರ
ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

















































error: Content is protected !!
Scroll to Top