ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ ಬಳಿ ಬೆಂಕಿ : ತಪ್ಪಿದ ಭಾರಿ ಅವಘಡ

ಬೈಂದೂರು : ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13 ರಂದು ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಸಂಭವಿಸಿದೆ. ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್‌ ಮೂಲಕ ಕೊಲ್ಲೂರಿಗೆ ಆಗಮಿಸಿದ ವೇಳೆ ಈ ಘಟನೆ ಸಂಭವಿಸಿದೆ. ಬೆಂಕಿ ತಗುಲುವ ಮುನ್ನವೇ ಸಿಎಂ ಬೆಂಗಾವಲು ಪಡೆ ಅಲ್ಲಿಂದ ತೆರಳಿದ್ದಾರೆ. ಹೆಲಿಕಾಫ್ಟರ್‌ ಪ್ಯಾನ್‌ ಗಾಳಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಡವನ್ನು ತಪ್ಪಿಸಿದ್ದಾರೆ. ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.



















































































error: Content is protected !!
Scroll to Top