ಒಂದೇ ಕುಟುಂಬದ ಆರು ಮಂದಿ ದುರ್ಮರಣ – ಇಬ್ಬರು ಗಂಭೀರ ಗಾಯ
ಸುಳ್ಯ: ಸರಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಧಾರುಣ ಘಟನೆ ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ಶುಕ್ರವಾರ ಸಂಭವಿಸಿದೆ.
ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಮಡಿಕೇರಿಗೆ ಸಾಗುತ್ತಿದ್ದ ಬಸ್ಸಿನ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂರು ಮಕ್ಕಳು ಹಾಗೂ ಓರ್ವ ಗಂಡಸು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಮೃತದೇಹಗಳನ್ನು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ಹೇಳಲಾಗಿದೆ. ಅಪಘಾತಗೊಂಡ ಕಾರು ಮಂಡ್ಯ ಮೂಲದ್ದು ಎನ್ನಲಾಗಿದ್ದು, ಮೃತಪಟ್ಟವರ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ.


































