ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾಹನ ಹಸ್ತಾಂತರ

ಶೈಕ್ಷಣಿಕ ಕಾರ್ಯದೊಂದಿಗೆ ಆರೋಗ್ಯ ಕ್ಷೇತ್ರಕ್ಕೂ ಜ್ಞಾನಸುಧಾ ಸಂಸ್ಥೆಯಿಂದ ಮಹತ್ತರ ಕೊಡುಗೆ – ಡಾ. ಕೃಷ್ಣಾನಂದ ಶೆಟ್ಟಿ

ಕಾರ್ಕಳ : ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್‌ ಟ್ರಸ್ಟ್‌ ವತಿಯಿಂದ ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೊಲೆರೋ ವಾಹನ ಹಸ್ತಾಂತರ ಕಾರ್ಯಕ್ರಮ ಎ. 14ರಂದು ನಡೆಯಿತು. ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾಮ್ ಶೆಟ್ಟಿ ಅವರು ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಅವರಿಗೆ ವಾಹನ ಹಸ್ತಾಂತರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಕೃಷ್ಣಾನಂದ ಶೆಟ್ಟಿ ಅಜೆಕಾರು ಪರಿಸರದ ನಾಗರಿಕರಿಗೆ ತುರ್ತು ಆರೋಗ್ಯದ ದೃಷ್ಟಿಯಿಂದ ಅನುಕೂಲವಾಗುವ ನಿಟ್ಟಿನಲ್ಲಿ ಡಾ. ಸುಧಾಕರ್‌ ಶೆಟ್ಟಿ ಅವರು ಬೊಲೆರೋ ವಾಹನ ನೀಡಿರುತ್ತಾರೆ. ಶೈಕ್ಷಣಿಕ ಕಾರ್ಯದೊಂದಿಗೆ ಆರೋಗ್ಯ ಕ್ಷೇತ್ರಕ್ಕೂ ಜ್ಞಾನಸುಧಾ ಸಂಸ್ಥೆ ಮಹತ್ತರ ಕೊಡುಗೆ ಸಲ್ಲಿಸುತ್ತಿದ್ದು, ಕೊರೊನಾ ಸಂದರ್ಭದ ಸೇವೆಯೂ ಸ್ಮರಣೀಯವೆಂದರು.

ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಸಹಕಾರ – ಡಾ. ಸುಧಾಕರ್‌ ಶೆಟ್ಟಿ
ಪ್ರತಿಯೊಬ್ಬರೂ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಬೇಕಿದೆ. ಟ್ರಸ್ಟ್‌ ವತಿಯಿಂದ ಮುಂದಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು. ಅಜೆಕಾರು ಭಾಗದ ಜನತೆಗೆ ಹೆಚ್ಚಿನ ಸೇವೆ ನೀಡುವಲ್ಲಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮಾರ್ಪಾಡಾಗಬೇಕಿದೆ ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಹೇಳಿದರು.
ಅಜೆಕಾರು ಪರಿಸರದ ಎಲ್ಲಾ ವೈದ್ಯಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅನುಷಾ ಶೆಟ್ಟಿ ಸ್ವಾಗತಿಸಿ, ಮುನಿಯಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸೌಮ್ಯ ವಂದಿಸಿದರು. ಉಪನ್ಯಾಸಕಿ ಸಂಗೀತ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

































































error: Content is protected !!
Scroll to Top