ಕಾರ್ಕಳ : ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಆಯ್ಕೆಯ ಉದ್ಯೋಗಗಳಿದ್ದು, ವಿದ್ಯಾರ್ಥಿಗಳು ಪಿಯು ವಿದ್ಯಾಭ್ಯಾಸದ ಅವಧಿಯಲ್ಲೇ ಭವಿಷ್ಯದ ಉದ್ಯೋಗಕ್ಕೆ ಅನುಗುಣವಾದ ಕೋರ್ಸ್‌ನ್ನು ಆಯ್ಕೆ ಮಾಡುವುದು ಅವಶ್ಯ ಎಂದು ಚೆನ್ನಪಟ್ಟಣದ ಸಂಪೂರ್ಣ ಇಂಟರ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಮತ್ತು ಹಾರ್ಟಿಕಲ್ಚರ್ ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಶ್ರೀಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಏ.14 ರಂದು ನಡೆದ ಕೃಷಿ ವಿಜ್ಞಾನ ವೃತ್ತಿ ಮಾರ್ಗದರ್ಶನ ಕಾರ್ಯಗಾರದಲ್ಲಿ ಮಾತನಾಡಿ, ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ದೊರಕಿಸಿಕೊಳ್ಳುವುದರ ಕುರಿತು ಮಾರ್ಗದರ್ಶನ ನೀಡಿದರು.
ಕ್ರಿಸ್ಟಲ್ ಎಜುಕೇಶನ್ ಸರ್ವೀಸಸ್‌ನ ಎಂ.ಡಿ. ಮಹೇಂದ್ರ ಕುಮಾರ್ ಮಾತನಾಡಿ, ಕೃಷಿ ಸಂಬಂಧಿತ ಅಧ್ಯಯನ ಮತ್ತು ಉದ್ಯೋಗಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಕಾಲೇಜಿನ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್., ಗಣಪತಿ ಭಟ್ ಕೆ. ಎಸ್., ಸಾರ್ವಜನಿಕ ಸಂಪರ್ಕಾಧಿಕಾರಿ ಲಿಶಾನ್ ಗೌಡ, ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕ ಡಾ. ಆದಮ್ ಶೇಖ್ ಕಾರ್ಯಕ್ರಮ ನಿರ್ವಹಿಸಿದರು.
































