ಕಾರ್ಕಳ : ಸಮಾಜ ಕಲ್ಯಾಣ ಇಲಾಖೆ, ದಲಿತ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಎ. 14 ರಂದು ತಾಲೂಕು ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಅಂಬೇಡ್ಕರ್ ವೃತ್ತದಲ್ಲಿ ತಹಶೀಲ್ದಾರ್ ಅನಂತ ಶಂಕರ್ ಬಿ., ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ ಮತ್ತು ಡಿವೈಎಸ್‌ಪಿ ಅರವಿಂದ ಕಲಗುಜ್ಜಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ತಾಲೂಕು ಕಚೇರಿಯಲ್ಲಿ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಗುರುದತ್ತ್ ಎಂ. ಎನ್., ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಪುಟ್ಟಯ್ಯ ಎಚ್., ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೋಮಶೇಖರ್, ಐಕ್ಯತಾ ಸಮಿತಿಯ ಜಿಲ್ಲಾಧ್ಯಕ್ಷ ಅಣ್ಣಪ್ಪ ನಕ್ರೆ, ಸಮತಾ ಸೈನಿಕ ದಳದ ಅಧ್ಯಕ್ಷ ಗಜೇಂದ್ರ ನಲ್ಲೂರು, ದಲಿತ ಸಂಘಟನೆಯ ಗೋವರ್ಧನ್, ಪೂವಪ್ಪ ಮಾಸ್ಟರ್, ಮಲೆಕುಡಿಯ ಸಂಘಟನೆಯ ಗಂಗಾಧರ ಈದು, ಶ್ರೀಧರ್ ಈದು, ರಾಘವ ಮೊದಲಾದವರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಚೇತನಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.































































