ಕೆಟ್ಟುಹೋದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥ

ಸಮಾರಂಭದಲ್ಲಿ ವಿತರಿಸಿದ ಆಹಾರ

ವಿಜಯನಗರ : ಖಾಸಗಿ ಕಾರ್ಯಕ್ರಮವೊಂದರಲ್ಲಿ ವಿತರಿಸಿದ ಆಹಾರ ಸೇವಿಸಿ 40 ಜನರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ಕುಟುಂಬವೊಂದರ ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ್ದ ಹಿರೇಹಡಗಲಿಯ 27 ಜನ, ಹ್ಯಾರಡ ಗ್ರಾಮದ 13 ಜನರಿಗೆ ಹೊಟ್ಟೆ ನೋವು ಆರಂಭವಾಗಿ ವಾಂತಿ ಭೇದಿ ಕಾಣಿಸಿಕೊಂಡಿದೆ.
ಅಸ್ವಸ್ಥಗೊಂಡಿದ್ದ ಎಲ್ಲರನ್ನು ಹಿರೇಹಡಗಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಲೀಂ ಹಾಗೂ ವೈದ್ಯರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅವರೆಲ್ಲ ದೋಷಪೂರಿತ ಆಹಾರ ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ ಎನ್ನು ಶಂಕೆ ವ್ಯಕ್ತವಾಗಿದೆ. ಇದೀಗ ಅವರು ಚೇತರಿಸಿಕೊಂಡಿದ್ದಾರೆ.





























































































































error: Content is protected !!
Scroll to Top