ಅತೀಕ್ ಅಹ್ಮದ್ ಹತ್ಯೆ : ನ್ಯಾಯಾಂಗ ಆಯೋಗದಿಂದ ತನಿಖೆ

17 ಪೊಲೀಸರ ಅಮಾನತು, 144 ಸೆಕ್ಷನ್‌ ಜಾರಿ

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ಡಕಾಯಿತ ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್‌ನ ಹತ್ಯೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಕೂಡಲೇ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಸೇರಿದಂತೆ ಉನ್ನತ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಯೋಗಿ, ಈ ಪ್ರಕರಣದ ತನಿಖೆಗೆ ಮೂವರು ಸದಸ್ಯರ ನ್ಯಾಯಾಂಗ ಆಯೋಗ ರಚಿಸುವಂತೆ ಸೂಚನೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ 17 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಪ್ರಯಾಗ್‌ರಾಜ್‌ನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಪ್ರಯಾಗ್​ರಾಜ್‌ನಲ್ಲಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗಲೇ ಮೂವರು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

















































error: Content is protected !!
Scroll to Top