ಮೆರವಣಿಗೆಯಲ್ಲಿ ಜನಸಾಗರ – ಕೇಸರಿಯ ಸ್ವಾಗತ
ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಏ. 17 ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಮೆರವಣಿಗೆಯ ಮೊದಲು ಅರುಣ್ ಪುತ್ತಿಲ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಕೇಸರಿಯ ಸ್ವಾಗತ
ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡ್, ವಾದ್ಯದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.


























