ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್ ನೇಮಕಗೊಂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಡಾ. ಎಂ. ವೀರಪ್ಪ ಮೊಯಿಲಿಯವರ ಮಾರ್ಗದರ್ಶನದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗರವರ ಶಿಫಾರಸ್ಸಿನಂತೆ ರಾಜ್ಯ ಪ್ರಚಾರ ಸಮಿತಿಯ ಸಹ ಅಧ್ಯಕ್ಷ ಮಂಜುನಾಥ್ ಭಂಡಾರಿಯವರು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಿದ್ದಾರೆ.

















































error: Content is protected !!
Scroll to Top