ಕಾರ್ಕಳ : ರಕ್ತದೊತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಏ. 17 ರಂದು ನಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ಚೇತನ ಕುಮಾರ್ (51) ಎಂಬುವವರೇ ಮೃತಪಟ್ಟ ವ್ಯಕ್ತಿ. ಚೇತನ್ ಏ.17 ರಂದು ತೋಟದ ಕೆಲಸಕ್ಕೆ ಹೋದವರು, ತೋಟದಲ್ಲಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದು, ಚಿಕಿತ್ಸೆಗಾಗಿ ನಿಟ್ಟೆ ಗಾಜ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಚೇತನ್ ಕುಮಾರ್ ಮೃತಪಟ್ಟಿರುತ್ತಾರೆ. ಈ ಕುರಿತು ಅಣ್ಣ ನಿರಂಜನ ಅತಿಕಾರಿ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ರಕ್ತದೊತ್ತೊಡ ಕಡಿಮೆಯಾಗಿ ವ್ಯಕ್ತಿ ಸಾವು
























