ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದಯ ಕುಮಾರ್ ಶೆಟ್ಟಿ ಮುನಿಯಾಲುರವರು ಏ. 18 ರಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ. ಆರ್. ರಾಜು, ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿ, ನೀರೇ ಕೃಷ್ಣ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಕಾಂಗ್ರೆಸ್ ಮುಖಂಡ ಅವೆಲಿನ್ ಲೂಯಿಸ್, ಅಲ್ಪಸಂಖ್ಯಾತ ಮೋರ್ಚದ ಜಿಲ್ಲಾ ಉಪಾಧ್ಯಕ್ಷ ಆರೀಪ್ ಕಲ್ಲೊಟ್ಟೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನಾ, ಕೃಷ್ಣಯ್ಯ ಶೆಟ್ಟಿ, ಇಂದಿರಾ ಶೆಟ್ಟಿ, ನಮಿತ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
























