ಡಿಕೆಶಿ ಆಸ್ತಿ 5 ವರ್ಷದಲ್ಲಿ 573 ಕೋಟಿ ರೂ. ವೃದ್ಧಿ

2018ರಲ್ಲಿ 840.08 ಕೋಟಿ ರೂ. ಆಸ್ತಿ ಇತ್ತು

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಅವರ ಕುಟುಂಬದವರ ಸಂಪತ್ತು ಕಳೆದ ಐದು ವರ್ಷಗಳಲ್ಲಿ 573 ಕೋಟಿ ರೂ. ಹೆಚ್ಚಳವಾಗಿದೆ.
2018ರ ವಿಧಾನಸಭಾ ಚುನಾವಣೆ ವೇಳೆ 840.08 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಡಿ.ಕೆ. ಶಿವಕುಮಾರ್ ಘೋಷಿಸಿಕೊಂಡಿದ್ದರು. ಅದು 2023ರ ಚುನಾವಣೆಯಲ್ಲಿ 1,413.78 ಕೋಟಿಗೆ ಏರಿಕೆಯಾಗಿದೆ. ಡಿಕೆಶಿ ಆಸ್ತಿ ಕಳೆದ ಐದು ವರ್ಷಗಳಲ್ಲಿ ಶೇ. 68.29 ರಷ್ಟು ಹೆಚ್ಚಳವಾಗಿದೆ.
ಕನಕಪುರ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿರುವ ಡಿ.ಕೆ. ಶಿವಕುಮಾರ್ ಸೋಮವಾರ ನಾಮಪತ್ರ ಸಲ್ಲಿಸುವ ವೇಳೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಈ ಮಾಹಿತಿ ನೀಡಿದ್ದಾರೆ. ಆ ಪ್ರಕಾರ ಶಿವಕುಮಾರ್ ಅವರು 251.69 ಕೋಟಿ ಮೌಲ್ಯದ ಚರ ಆಸ್ತಿಯನ್ನು ಹೊಂದಿದ್ದಾರೆ. ಇದರಲ್ಲಿ 6.75 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಸೇರಿದೆ.
ಒಟ್ಟಾರೆಯಾಗಿ ಡಿಕೆಶಿ ಕುಟುಂಬ 273.42 ಕೋಟಿ ಮೌಲ್ಯದ ಚರ ಆಸ್ತಿಯನ್ನು ಹೊಂದಿದೆ. ಇದಲ್ಲದೆ, ಅವರ ಕುಟುಂಬ ಒಟ್ಟು 1,140.36 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿ ಹೊಂದಿದೆ.
ಆದಾಯ ತೆರಿಗೆಗೆ ಸಂಬಂಧಿಸಿದ ನಾಲ್ಕು ಪ್ರಕರಣ, ಜಾರಿ ನಿರ್ದೇಶನಾಲಯದ ಎರಡು ಪ್ರಕರಣ ಮತ್ತು ಒಂದು ಸಿಬಿಐ ಪ್ರಕರಣ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಒಟ್ಟು 19 ಪ್ರಕರಣಗಳು ದಾಖಲಾಗಿವೆ.

















































error: Content is protected !!
Scroll to Top