ರಾಜಕೀಯ ಮಾಡಬೇಡಿ : ಸಿದ್ದರಾಮಯ್ಯಗೆ ಜೈಶಂಕರ್‌ ತಿರುಗೇಟು

ಸುಡಾನ್‌ನಲ್ಲಿ ಸಿಕ್ಕಿಬಿದ್ದಿರುವ ಕರ್ನಾಟಕದ 31 ಜನರನ್ನು ರಕ್ಷಿಸುವ ವಿಚಾರ

ಹೊಸದಿಲ್ಲಿ : ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ 31 ಕನ್ನಡಿಗರ ವಿಚಾರ ಹಿಡಿದುಕೊಂಡು ರಾಜಕೀಯ ಮಾಡಲು ಹೊರಟಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವಿದೇಶಾಂಗ ಅಚಿವ ಡಾ.ಎಸ್‌.ಜೈಶಂಕರ್‌ ತಿರುಗೆಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ ಜೈಶಂಕರ್ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಪಾಠ ಮಾಡಿದ್ದಾರೆ.
ಸುಡಾನ್‌ನಲ್ಲಿ ಕಳೆದ ಕೆಲವು ದಿನಗಳಿಂದ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ 31 ಮಂದಿ ಆಹಾರವಿಲ್ಲದೆ ಪರದಾಡುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ ಕೇಂದ್ರ ಸರ್ಕಾರ ಅವರನ್ನು ಮರಳಿ ಕರೆತರಲು ಇನ್ನೂ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರ್ಕಾರ ರಾಜತಾಂತ್ರಿಕ ಮಾತುಕತೆ ನಡೆಸಬೇಕು ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್, “ನಿಮ್ಮ ಟ್ವೀಟ್‌ ನೋಡಿ ದಿಗಿಲುಗೊಂಡೆ. ಅಲ್ಲಿ ಜೀವಗಳು ಅಪಾಯದಲ್ಲಿವೆ. ರಾಜಕೀಯ ಮಾಡಬೇಡಿʼʼ ಎಂದು ತಿರುಗೇಟು ನೀಡಿದ್ದಾರೆ.
ಏ.14ರಂದು ಸಂಘರ್ಷ ಪ್ರಾರಂಭವಾದಾಗಿನಿಂದ ಖಾರ್ಟೂಮ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಮತ್ತು ಪಿಐಒಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಭದ್ರತಾ ಕಾರಣಗಳಿಗಾಗಿ ಸುಡಾನ್‌ನಲ್ಲಿರುವ ಭಾರತೀಯರ ವಿವರಗಳನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ ಎಂದು ಜೈಶಂಕರ್‌ ಹೇಳಿದ್ದಾರೆ.

















































error: Content is protected !!
Scroll to Top