298 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕಾರ್ಕಳ : 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ. ಸಂಸ್ಥೆಯ 380 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 67 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ, 211 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ ಹಾಗೂ 298 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಕಾಲೇಜಿಗೆ ಒಟ್ಟು 7 ರ‍್ಯಾಂಕ್
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪ್ರಸ್ತುತ್ ಪಟೇಲ್ 592 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರ‍್ಯಾಂಕ್, ಸುಮಂತ್ ಶೆಟ್ಟಿ 591 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್, ಆದಿತ್ಯ ಹೊಳ್ಳ ಮತ್ತು ಅಭಯ್ ಎಸ್. ಎಸ್. 588 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದಿದ್ದು, ಜಾಗೃತಿ ಕೆ.ಪಿ. 587 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 10 ನೇ ರ‍್ಯಾಂಕ್ ಗಳಿಸಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ದಿವಿತ್ ಪಿ. ಗೌಡ 590 ಅಂಕದೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ಅನಘ 589 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಪಡೆದುಕೊಂಡಿದ್ದಾರೆ.

ಭೌತಶಾಸ್ತ್ರದಲ್ಲಿ 16, ರಸಾಯನಶಾಸ್ತ್ರದಲ್ಲಿ 02, ಗಣಿತದಲ್ಲಿ 34, ಜೀವಶಾಸ್ತ್ರದಲ್ಲಿ 03, ಗಣಕ ವಿಜ್ಞಾನದಲ್ಲಿ 117, ವ್ಯವಹಾರ ಅಧ್ಯಯನದಲ್ಲಿ 14, ಲೆಕ್ಕಶಾಸ್ತ್ರದಲ್ಲಿ 10, ಕನ್ನಡದಲ್ಲಿ 01, ಸಂಸ್ಕೃತದಲ್ಲಿ 19 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿ ವಿಶೇಷ ಸಾಧನೆಗೈದಿದ್ದಾರೆ.
ಸಂಸ್ಥೆಯು ಸತತ ಎರಡನೇ ಬಾರಿ ಶೇ. 100 ಫಲಿತಾಂಶ ದಾಖಲಿಸಿಕೊಂಡಿದೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸ ಮತ್ತು ಉಪನ್ಯಾಸಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.




























