ಚುನಾವಣೆಗೆ 5,102 ನಾಮಪತ್ರ ಸಲ್ಲಿಕೆ

ಈ ಸಲವೂ ಮಹಿಳಾ ಅಭ್ಯರ್ಥಿಗಳು ಕಡಿಮೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೇ ದಿನವಾದ ಗುರುವಾರದವರೆಗೆ 3,600 ಅಭ್ಯರ್ಥಿಗಳಿಂದ 5,102 ನಾಮಪತ್ರ ಸಲ್ಲಿಕೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಏಪ್ರಿಲ್‌ 13ರಿಂದ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಈ ಬಾರಿ ನಾಮಪತ್ರ ಸಲ್ಲಿಕೆಯಲ್ಲಿ ಪುರುಷ ಅಭ್ಯರ್ಥಿಗಳು ಹೆಚ್ಚಿದ್ದಾರೆ. ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ. 4,710 ನಾಮಪತ್ರಗಳಲ್ಲಿ 3,327 ಪುರುಷ ಅಭ್ಯರ್ಥಿಗಳಾಗಿದ್ದಾರೆ. 391 ನಾಮಪತ್ರಗಳಲ್ಲಿ 304 ಮಹಿಳಾ ಅಭ್ಯರ್ಥಿಗಳಾಗಿದ್ದಾರೆ. ತೃತೀಯ ಲಿಂಗದ ಒಬ್ಬ ಅಭ್ಯರ್ಥಿ ನಾಮಮತ್ರ ಸಲ್ಲಿಸಿದ್ದಾರೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳಲ್ಲಿ 707 ಅಭ್ಯರ್ಥಿಗಳು ಬಿಜೆಪಿ, 651 ಅಭ್ಯರ್ಥಿಗಳು ಕಾಂಗ್ರೆಸ್‌ ಮತ್ತು 455 ಅಭ್ಯರ್ಥಿಗಳು ಜೆಡಿಎಸ್‌ ಪಕ್ಷದವರು. ಉಳಿದ ಅಭ್ಯರ್ಥಿಗಳು ಇತರೆ ಸಣ್ಣ ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ. ಹೆಚ್ಚೆಂದರೆ, ಒಬ್ಬ ಅಭ್ಯರ್ಥಿಯು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಅಚ್ಚರಿಯ ನಡೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರು ಕನಕಪುರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಅವರ ಸಹೋದರ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್‌ಗೆ ಇಡಿ ಇತ್ಯಾದಿ ತನಿಖಾ ಸಂಸ್ಥೆಗಳ ಭಯ ಇರುವ ಕಾರಣ ಡಿ.ಕೆ. ಸುರೇಶ್‌ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡರೆ ಸುರೇಶ್‌ ಕಣದಲ್ಲಿರುತ್ತಾರೆ ಎನ್ನಲಾಗಿದೆ.

















































error: Content is protected !!
Scroll to Top