ಕಾರ್ಕಳ : 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೆಎಂಇಎಸ್ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ. ಒಟ್ಟು 71 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು, 30 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 20 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ ಅಂಕ ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ 581 ಅಂಕ ಪಡೆದು ಮಾನ್ಯ ಶೆಟ್ಟಿ ಕಾಲೇಜಿಗೆ ಪ್ರಥಮ ಸ್ಥಾನ, 579 ಅಂಕದೊಂದಿಗೆ ಚೈತನ್ಯ ದ್ವಿತೀಯ ಸ್ಥಾನಿಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 577 ಅಂಕ ಪಡೆದು ನಿನಾದ್ ಪ್ರಭು ಪ್ರಥಮ ಮತ್ತು 575 ಅಂಕದೊಂದಿಗೆ ತಾನಿಯ ಬೇಗಂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಕೆಎಂಇಎಸ್ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ









































