ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು
ಚಾಮರಾಜನಗರ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಜೆಎಸ್ಎಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ವಿಜಯಲಕ್ಷ್ಮಿ (18) ಆತ್ಮಹತ್ಯೆ ಮಾಡಿಕೊಂಡವಳು. ಗುಂಡ್ಲುಪೇಟೆ ತಾಲ್ಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ ಜೆಎಸ್‌ಎಸ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆಸಿಇಟಿ) ತಯಾರಿ ನಡೆಸಲು ಹಾಸ್ಟೆಲ್‌ನಲ್ಲಿ ತಂಗಿದ್ದಳು. ಸ್ಥಳಕ್ಕೆ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



































