ಕಾರ್ಕಳ : ಎಸ್ಎನ್‌ವಿ ಪದವಿ ಪೂರ್ವ ಕಾಲೇಜು 2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಪಡೆದುಕೊಂಡಿದೆ. ಒಟ್ಟು 90 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 53 ವಿದ್ಯಾರ್ಥಿಗಳು ಅತ್ತ್ಯುನ್ನತ ಶ್ರೇಣಿಯಲ್ಲಿ ಹಾಗೂ 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ವಿದ್ಯಾರ್ಥಿನಿಯರಾದ ಶ್ರೇಯಾ ಎಸ್. ಶೆಟ್ಟಿ ಇವರು 590 (Economics-99, Business Studies -100, Accountany -99, Computer science -100) ಅಂಕಗಳೊಂದಿಗೆ ಪ್ರಥಮ ಸ್ಥಾನ, ಶ್ರೀ ರಕ್ಷಾ 587 (Business Studies – 99, Accountancy – 100, Statistics -100) ಮತ್ತು ಶ್ರದ್ಧಾ ಎಸ್. ಶೆಟ್ಟಿ 583 (Computer science -99) ಅಂಕಗಳೊಂದಿಗೆ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿರುತ್ತಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂಧಿಸಿದ್ದಾರೆ.























